ಕಡಬ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com  ಕಡಬ, ಜ.26. ಪ್ರಕರಣವೊಂದಕ್ಕೆ ಸಂಬಂಧಿಸಿ  ಕಳೆದ ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂದಿಸಿದ್ದಾರೆ.

ಈತನ ವಿರುದ್ದ  ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ, ಸುಳ್ಯ, ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು. ಈತನನ್ನು ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದು  ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಮಾನ್ಯ ನ್ಯಾಯಾಲವು  ಆರೋಪಿಗೆ  15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.  ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿಎಸ್ , ಕಡಬ ಠಾಣಾ ಎಸ್.ಐ  ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ  ಕಡಬ ಠಾಣಾ ಎ.ಎಸ್.ಐ ಸುರೇಶ್ ಮತ್ತು ಇಲಾಖೆ ಜೀಪಿನ ಚಾಲಕ ನಾರಾಯಣ ಪಾಟಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Also Read  ಉಗ್ರರೊಂದಿಗೆ ಗುಂಡಿನ ಚಕಮಕಿ ➤ ಐಎಸ್‌ಐ ಟಾಪ್ ಬ್ರಿಗೇಡಿಯರ್ ಹತ್ಯೆ

 

 

error: Content is protected !!
Scroll to Top