(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 26. ಭಾರತೀಯ ಜೀವ ವಿಮಾ ನಿಗಮ (LIC) ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 9394 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ licindia.in ಗೆ ಭೇಟಿ ನೀಡುವ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಅಥವಾ ಮುಂಬೈನ ಇನ್ಶುರೆನ್ಸ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಫೆಲೋಶಿಪ್ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 1ನೇ ಜನವರಿ 2023 ಕ್ಕೆ 21 ವರ್ಷಗಳಿಗಿಂತ ಕಡಿಮೆಯಿರಬಾರದು. ಹಾಗೆಯೇ 30 ವರ್ಷವನ್ನು ದಾಟಿರಬಾರದು. ಅಂದರೆ ಅಭ್ಯರ್ಥಿಗಳು 2ನೇ ಜನವರಿ 1993 ಕ್ಕಿಂತ ಮೊದಲು ಮತ್ತು 1ನೇ ಜನವರಿ 2002 ಕ್ಕಿಂತ ನಂತರ ಜನಿಸಬಾರದು. ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.