8 ಕನ್ನಡಿಗರಿಗೆ ಪದ್ಮ ಪ್ರಶಸ್ತಿಯು ಕರ್ನಾಟಕದಲ್ಲಿನ ಅಪಾರ ಪ್ರತಿಭೆಯನ್ನು ತೋರಿಸುತ್ತದೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.26. ವಿವಿಧ ಕ್ಷೇತ್ರಗಳ 8 ಮಂದಿ ಕನ್ನಡಿಗರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಕರ್ನಾಟಕದಲ್ಲಿರುವ ಅಮೋಘ ಪ್ರತಿಭೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ಯಾವುದೇ ನಿರೀಕ್ಷೆಗಳಿಲ್ಲದೆ ದೇಶಕ್ಕೆ ಉತ್ಕೃಷ್ಟ ಕೊಡುಗೆ ನೀಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು.

ಕರ್ನಾಟಕದಿಂದ ಮಾಜಿ ಸಿಎಂ ಎಸ್ಎಂ ಕೃಷ್ಣ, ಸಮಾಜ ಸೇವಕಿ ಸುಧಾ ಮೂರ್ತಿ ಮತ್ತು ಕನ್ನಡದ ಖ್ಯಾತ ಸಾಹಿತಿ ಪ್ರೊ ಎಸ್ಎಲ್ ಬೈರಪ್ಪ ಸೇರಿದಂತೆ ಎಂಟು ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಎಂಟು ಮಂದಿಯ ಆಯ್ಕೆ ಕರ್ನಾಟಕದಲ್ಲಿರುವ ಅಗಾಧ ಪ್ರತಿಭೆಯನ್ನು ತೋರಿಸುತ್ತದೆ. ಸರ್ಕಾರ ಎಲ್ಲರಿಗೂ ಅಭಿನಂದನೆ ಸಲ್ಲಿಸಲು ಬಯಸುತ್ತದೆ ಎಂದು ಬೊಮ್ಮಾಯಿ ಹೇಳಿದರು.

Also Read  ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ವಾಸುದೇವ ಸಾಮಗ ನಿಧನ

 

error: Content is protected !!