ಮಾಗಡಿ ರಸ್ತೆ ಅಪಘಾತ ➤ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 26. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಅಪಘಾತದಲ್ಲಿ ಮಹಿಳೆಯೊಬ್ಬರು ಬಲಿಯಾಗಿರುವ ದಾರುಣ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಖಾಸಗಿ ಶಾಲೆಯ ಉದ್ಯೋಗಿ ನಳಿನಾ ಮೃತಪಟ್ಟವರು. ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯ ಬಳಿ ಇಂದು ಬೆಳಿಗ್ಗೆ ಸ್ಕೂಟರ್ ನಲ್ಲಿ ನಳಿನಾ ಅವರು ಹೋಗುತ್ತಿದ್ದಾಗ ರಸ್ತೆ ಕಾಮಗಾರಿಯ ಗುಂಡಿ ತಪ್ಪಿಸಲು ಹೋದಾಗ ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Scroll to Top