ಪೊಲೀಸ್ ವಾಹನ ಢಿಕ್ಕಿ-ಅಮೆರಿಕಾದಲ್ಲಿ ಭಾರತ ಮೂಲದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕಾ, ಜ.27. ಸಿಯಾಟಲ್ ಪೊಲೀಸ್ ಗಸ್ತು ವಾಹನ ಢಿಕ್ಕಿ ಹೊಡೆದು ಭಾರತ ಮೂಲದ 23 ವರ್ಷದ ಯುವತಿ ಮೃತಪಟ್ಟ ಘಟನೆ ಅಮೆರಿಕದ ಸೌತ್ ಲೇಕ್ ಯೂನಿಯನ್‌ನಲ್ಲಿ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಜಾಹ್ನವಿ ಕಂದುಲಾ ಮೃತ ಯುವತಿ ಎನ್ನಲಾಗಿದೆ. ಈಕೆ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನ ವಿದ್ಯಾರ್ಥಿನಿಯಾಗಿದ್ದಳು ಎಂದು ವರದಿಯಾಗಿದೆ.

ಸಂತ್ರಸ್ತೆ ಗಂಭೀರ ಗಾಯಗೊಂಡಿದ್ದಳು. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

 

Scroll to Top