20 ವರ್ಷದ ಯುವಕನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಜ.27. ಪ್ರತಾಪ್‌ಗಢ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಮಗನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಅತರ್ಸುಯಿ ಬದ್ಲಿ ಕಾ ಪೂರ್ವಾ ಗ್ರಾಮದಲ್ಲಿ ರಾತ್ರಿ ಬಾಘರೈ ಪೊಲೀಸ್ ಠಾಣೆ ವ್ಯಾಪ್ತಿಯ ರೋರ್ ಗ್ರಾಮದ ನಿವಾಸಿ ವಿಶಾಲ್ ಪಾಂಡೆ ಎಂಬಾತನನ್ನು ಅಪರಿಚಿತರು ಕಾರಿನಿಂದ ಡಿಕ್ಕಿ ಹೊಡೆದು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸದರ್ ಅಮರ್ ನಾಥ್ ಗುಪ್ತಾ ತಿಳಿಸಿದ್ದಾರೆ. ಮೃತರ ಕುಟುಂಬದವರ ದೂರಿನ ಮೇರೆಗೆ ಗ್ರಾಮದ ಮಾಜಿ ಮುಖ್ಯಸ್ಥ ರಂಗ್ ಬಹದ್ದೂರ್ ಸೇರಿದಂತೆ ಏಳು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತರ ಕುಟುಂಬ ಹಾಗೂ ಆರೋಪಿಗಳ ನಡುವಿನ ಹಳೆ ದ್ವೇಷವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.

Also Read  ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಗೆ ಕರೆಂಟ್‌ ಶಾಕ್‌ ನೀಡಿ ಕೊಲೆ

error: Content is protected !!
Scroll to Top