4 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ



(ನ್ಯೂಸ್ ಕಡಬ)newskadaba.com  ಭುವನೇಶ್ವರ, ಜ.27. ನಾಲ್ಕು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಂದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಸ್ಕಾ ಬಳಿ ಬಂಧಿಸಲಾಗಿದೆ.







ಮಗು ನಾಪತ್ತೆಯಾದ ಬಳಿಕ ಮನೆಯವರು ಮನೆಯ ಟೆರೇಸ್‌ನಿಂದ ರಕ್ತದ ಮಡುವಿನಲ್ಲಿ ಮಗುವನ್ನು ಕಂಡಿದ್ದಾರೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಲಾಗಲಿಲ್ಲ.






ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕಬ್ಬಿಣದ ಬಾಗಿಲಿನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ಮಾಹಿತಿ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸಾವಿಗೆ ನಿಜವಾದ ಕಾರಣ ಖಚಿತವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

error: Content is protected !!
Scroll to Top