ರಸ್ತೆ, ಆಸ್ಪತ್ರೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ತೀರ್ಮಾನ ➤ ಸಿಎಂ ಬೊಮ್ಮಾಯಿ ಘೋಷಣೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ರಸ್ತೆ, ಆಸ್ಪತ್ರೆ, ಸಂಸ್ಥೆಗಳಿಗೆ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 191ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಬ್ರಿಟಿಷರ ಕಾಲದಲ್ಲಿ ಬ್ರಿಟಿಷ್ ಖ್ಯಾತನಾಮರ ಹೆಸರುಗಳನ್ನು ಬೆಂಗಳೂರಿನ ರಸ್ತೆ, ಆಸ್ಪತ್ರೆಗಳಿಗೆ ಇಡಲಾಗಿತ್ತು. ಈ ವಿಚಾರವನ್ನು ಸಂಸದ ಪಿ.ಸಿ.ಮೋಹನ್ ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಆದ್ದರಿಂದ ರಸ್ತೆ, ಆಸ್ಪತ್ರೆ, ಸಂಸ್ಥೆಗಳಿಗೆ ಕನ್ನಡ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಹೆಸರಿಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಎನ್ನಲಾಗಿದೆ.

Also Read  2023 ರಾಜ್ಯ ವಿಧಾನಸಭೆ ಚುನಾವಣೆ ➤ಮತದಾನದ ದಿನ ವಿಶೇಷ ರೈಲು, ಹೆಚ್ಚುವರಿ ಕೋಚ್ ಅಳವಡಿಕೆ!

.

 

error: Content is protected !!
Scroll to Top