ಮುದುಕನ ಮದುವೆಯಾಗಿ ಚಿನ್ನ ದೋಚಿ 2ನೇ ಪತ್ನಿ ಪರಾರಿ

(ನ್ಯೂಸ್ ಕಡಬ)newskadaba.com  ಎರಡನೇ ವಿವಾಹದ ನೆಪದಲ್ಲಿ 62 ವರ್ಷದ ವ್ಯಕ್ತಿಯೊಬ್ಬರಿಗೆ ಟೋಪಿ ಹಾಕಿ 2.30 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಮಹಿಳೆ ಪರಾರಿಯಾಗಿರುವ ಘಟನೆ ಕಾಟನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಕಾಟನ್‌ಪೇಟೆ ಒಟಿಸಿ ರಸ್ತೆಯ ಷಣ್ಮುಗಂ ಮೋಸ ಹೋಗಿದ್ದು, ಈ ಕೃತ್ಯ ಎಸಗಿ ಪರಾರಿಯಾಗಿರುವ ತಮಿಳುನಾಡು ಮೂಲದ ಮಲ್ಲಿಕಾ ಅಲಿಯಾಸ್‌ ಮಲ್ಗರ್‌ (35) ಪತ್ತೆಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಬ್ರೋಕರ್‌ ಮೂಲಕ ಷಣ್ಮುಗಂ ಅವರನ್ನು ಪರಿಚಯ ಮಾಡಿಕೊಂಡು ಬಳಿಕ ಎರಡನೇ ಮದುವೆ ಮಾಡಿಕೊಂಡು ಆರೋಪಿ ವಂಚಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಸೆಪ್ಟೆಂಬರ್ 21 ರಿಂದ ಮೈಸೂರು ದಸರಾ

ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಮೊದಲ ಪತ್ನಿ ವಿಚ್ಛೇದನ ನೀಡಿದ್ದ ಷಣ್ಮುಗಂ, ತಮ್ಮ 10 ವರ್ಷದ ಮಗನ ಜತೆ ನೆಲೆಸಿದ್ದರು. ಮೆಕ್ಯಾನಿಕ್‌ ಆಗಿ ಜೀವನ ಸಾಗಿಸುತ್ತಿದ್ದ ಅವರು, ಇತ್ತೀಚೆಗೆ ಎರಡನೇ ವಿವಾಹವಾಗಲು ನಿರ್ಧರಿಸಿದ್ದರು ಎನ್ನಲಾಗಿದೆ.

 

error: Content is protected !!
Scroll to Top