ವೃದ್ಧೆಯ ಚಿನ್ನದ ಸರ ಎಗರಿಸಿದ್ದ ಇಬ್ಬರು ಕಳ್ಳರು ➤ ಖರೀದಿಸಿದ ಇನ್ನೊಬ್ಬನ ಬಂಧನ                           

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಇತ್ತೀಚೆಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಸೈದ್‌ ಖಾಸೀಫ್‌(22), ಫರೀದ್‌ ಅಹಮದ್‌(20) ಹಾಗೂ ಕಳವು ಮಾಲು ಸ್ವೀಕರಿಸಿದ್ದ ಪಾದರಾಯನಪುರದ ಸುಲ್ತಾನ್‌ ಪಾಷಾ(27) ಬಂಧಿತರು. ಆರೋಪಿಗಳಿಂದ 48.50 ಗ್ರಾಂ ತೂಕದ ಚಿನ್ನದ ಸರ, ಕದ್ದ ಮೊಬೈಲ್‌ ಮಾರಾಟದಿಂದ ಬಂದಿದ್ದ 4,720 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

Also Read  ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ.ನೀಡುವ 'ಗೃಹಲಕ್ಷ್ಮಿ' ಯೋಜನೆ

ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಘಟನಾ ಸ್ಥಳ ಹಾಗೂ ಸುತ್ತಮುತ್ತಲ ಸ್ಥಳಗಳ 400ಕ್ಕೂ ಅಧಿಕ ಸಿಸಿಟಿವಿ ಕ್ಯಾಮರಾ ದೃಶ್ಯ ಪರಿಶೀಲಿಸಿ ಸಿಕ್ಕ ಸುಳಿವಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

error: Content is protected !!
Scroll to Top