ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ► ಗೋಳಿತ್ತಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ನೆಲ್ಯಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮಪಾಲ ರಾವ್, ಸುಳ್ಯ ಮಂಡಲ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ರಾವ್, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್., ತೇಜಸ್ವಿನಿ ಕಟ್ಟಪುಣಿ, ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಅರ್.ಕೆ. ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಿಡಿಸಲಾದ ಪಟಾಕಿಯ ಕಸವನ್ನು ಕಾರ್ಯಕರ್ತರು ಗುಡಿಸಿ ಸ್ವಚ್ಚಗೊಳಿಸಿ ಸ್ವಚ್ಛ ಭಾರತದ ಕನಸಿಗೆ ಮಾದರಿಯಾದರು.

Also Read  ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ

error: Content is protected !!
Scroll to Top