ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ➤ ಸಿಎಂ ಬೊಮ್ಮಾಯಿ 

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭರವಸೆ ನೀಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಆಯೋಜನೆ ಮಾಡಿರುವ “ವಿಜ್ಞಾನ ಮೇಳ 2023″ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೇವಲ ಕಟ್ಟಡ ಕಟ್ಟಿದರೆ ಸಾಲದು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನೂ ಕೊಡಬೇಕು. ಯಾವ ಯಾವ ಶಾಲೆಯಲ್ಲಿ ಏನೇನು ಆಗಬೇಕಿದೆ? ಅಭಿವೃದ್ಧಿಗೆ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂದು ಪಟ್ಟಿ ನೀಡಿ, ಶಾಲೆಗಳ ಸಮಗ್ರ ಅಭಿವೃದ್ಧಿಗೆ ನಾನು ಅನುದಾನ ಕೊಡುತ್ತೇನೆಂದು ಹೇಳಿದರು.

Also Read  ದಿನ ಭವಿಷ್ಯ

 

error: Content is protected !!
Scroll to Top