ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು ➤ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು       

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಆರೋಪಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ವ್ಯತ್ಯಯ ಕಂಡು ಬಂದಿದೆ. ಕೂಡಲೇ ಆತನನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶುಗರ್​ ಪ್ರಮಾಣ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ತಿಳಿದುಬಂದಿದೆ.

Also Read    ಚರಂಡಿಯಲ್ಲಿ ಪಲ್ಟಿಯಾದ ಮರಳು ತುಂಬಿದ್ದ ಟಿಪ್ಪರ್ ➤ ಬಾಲಕ ಸೇರಿ ಇಬ್ಬರು ಮೃತ್ಯು

ನಿಯಮಿತ ಮಾತ್ರೆಗಳಿಂದ ಹೆಚ್ಚಿನ ಮಾತ್ರಗಳನ್ನು ಸೇವಿಸಿರುವ ಶಂಕೆಗಳು ಅಧಿಕಾರಿಗಳಲ್ಲಿ ಮೂಡಿದ್ದು, ಈ ಬಗ್ಗೆ ಅಧಿಕಾರಿಗಳು ವೈದ್ಯರ ಬಳಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

 

 

error: Content is protected !!
Scroll to Top