ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಲಕ್ಷದ್ವೀಪ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾತ್ರಿ ಬಂದಿಳಿದರು.

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಸಂಭ್ರಮಾಚರಿಸಿದರು. ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪಿ.ರಾಧಾಕೃಷ್ಣನ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಸುನೀಲ್ ಕುಮಾರ್, ಕೋಟ ಶ್ರೀನಿವಾಸ್ ಪೂಜಾರಿ, ಎಸ್. ಅಂಗಾರ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರಧಾನಿಯನ್ನು ಸ್ವಾಗತಿಸಿದರು. ನಂತರ ಪ್ರಧಾನಿ ಮೋದಿ ಅಭಿಮಾನಿಗಳತ್ತ ಕೈ ಬೀಸಿ ಹರ್ಷ ವ್ಯಕ್ತಪಡಿಸಿ, ಸಂಭ್ರಮಾಚರಿಸಿದರು.

Also Read  ಮಹಿಳೆ ಮೇಲೆ ಅತ್ಯಾಚಾರ‌ ಆರೋಪ ➤ ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು

ಸ್ಥಳದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು, ಎಡಿಜಿಪಿ ಕಮಲ್ ಪಂತ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಭದ್ರತೆ ಕಲ್ಪಿಸಿದ್ದಾರೆ. ಮಂಗಳವಾರದಂದು ಬೆಳಗ್ಗೆ ಸುಮಾರು 7:30ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ತೆರಳಿ ಬಳಿಕ ಅವರು ಲಕ್ಷದ್ವೀಪಕ್ಕೆ ತೆರಳಲಿದ್ದಾರೆ‌.

error: Content is protected !!
Scroll to Top