ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ ➤ ಸಚಿವ ಆರ್. ಅಶೋಕ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಫೆಬ್ರವರಿ 2 ರಿಂದ ಮೈಸೂರು,ಮಂಗಳೂರು, ಬೆಳಗಾವಿ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Also Read  ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಚುನಾವಣಾ ಪ್ರಮಾಣ ವಚನ ಬೋಧನೆ

error: Content is protected !!
Scroll to Top