ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ ➤ ಅಧಿಕಾರಿಗೆ 5 ವರ್ಷ ಜೈಲು, 1.50 ಕೋ.ರೂ. ದಂಡ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯವು ವಲಯ ಅರಣ್ಯಾಧಿಕಾರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದು ಪ್ರಸ್ತುತ ನಿವೃತ್ತರಾಗಿರುವ ಮಂಗಳೂರು ದೇರೆಬೈಲ್‌ ಕೊಂಚಾಡಿ ನಿವಾಸಿ ಎಸ್‌.ರಾಘವ ಪಾಟಾಳಿ ಶಿಕ್ಷೆಗೊಳಗಾದ ಅಪರಾಧಿ.

ಈತನ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2011ರ ಜು.21ರಂದು ಭ್ರಷ್ಟಾಚಾರ ತಡೆ ಕಾಯಿದೆ 1988ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ(ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಶುಕ್ರವಾರದಂದು ಅಪರಾಧಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1.50 ಕೋ.ರೂ. ದಂಡ, ದಂಡ ಪಾವತಿಸಲು ವಿಫ‌ಲನಾದರೆ ಮತ್ತೆ 1 ವರ್ಷ ಹೆಚ್ಚುವರಿ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Also Read  ನಿಂತಿಕಲ್ಲು: 'ಈಝಿ ಬಝಾರ್' ಹೋಲ್ ಸೇಲ್ ಅಂಗಡಿ ಶುಭಾರಂಭ

error: Content is protected !!
Scroll to Top