ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೊರಹಾಕಿದ ಡಿಸಿಯನ್ನು ಅಮಾನತು ಮಾಡಿ ➤ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಜ.28. ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಳ್ಳಾರಿಯ ತಮ್ಮ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದರು. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಅಧಿಕಾರಿಯ ಕ್ರಮ ಆಘಾತಕಾರಿ. ಡಿಸಿ ಮನೆ ಬಳಿ ಪ್ರತಿಭಟನೆ ನಡೆಸಿದ್ದಕ್ಕೆ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಿಂದ ಹೊರ ಹಾಕಲಾಗಿದೆ. ಸಮಸ್ಯೆಯನ್ನು ತಮ್ಮ ಗಮನಕ್ಕೆ ತಂದು ಸರಿಪಡಿಸುವ ಕ್ರಮಗಳನ್ನು ತೆಗೆದುಕೊಂಡಿದ್ದಕ್ಕಾಗಿ ಡಿಸಿ ವಿದ್ಯಾರ್ಥಿಗಳನ್ನು ಶ್ಲಾಘಿಸಬೇಕಿತ್ತು.

Also Read  ಸಂಘಪರಿವಾರದ ಸದಸ್ಯರಿಂದ ದನ ಕಳ್ಳತನಕ್ಕೆ ಯತ್ನ ➤ ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು

error: Content is protected !!
Scroll to Top