ಭಾರತದಲ್ಲಿ 2,967 ಹುಲಿಗಳಿವೆ ! ➤ ‘ಸುಪ್ರೀಂ’ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.28. ‘2018ರ ವರದಿಯೊಂದರ ಪ್ರಕಾರ ಭಾರತದಾದ್ಯಂತ ಇರುವ 53 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 2,967 ಹುಲಿಗಳು ಇವೆ’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ದೇಶದಲ್ಲಿ ಅಪಾಯದಲ್ಲಿರುವ ಹುಲಿಗಳನ್ನು ರಕ್ಷಿಸಲು ಕೋರಿ 2017ರಲ್ಲಿ ವಕೀಲ ಅನುಪಮ್‌ ತ್ರಿಪಾಠಿ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ. ನಾಗರತ್ನ ಅವರಿದ್ದ ಪಿಠವು ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಐಶ್ವರ್ಯ ಭಾಟಿ ಅವರು, ‘ಹುಲಿಗಳ ಸಂರಕ್ಷಣೆ ಹಾಗೂ ಅವುಗಳ ಸಂಖ್ಯೆಯ ಹೆಚ್ಚಳಕ್ಕೆ ಈಗಾಗಲೇ ಬಹಳಷ್ಟು ಕ್ರಮ ಕೈಗೊಳ್ಳಲಾಗಿದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅನುಪಮ್‌ ತ್ರಿಪಾಠಿ ಅವರು ಗೈರುಹಾಜರಾಗಿದ್ದ ಕಾರಣ, ಸುಪ್ರೀಂ ಕೋರ್ಟ್‌ ಅರ್ಜಿಯ ವಿಚಾರಣೆಯನ್ನು ಮಾರ್ಚ್‌ಗೆ ಮುಂದೂಡಿತು.

Also Read  ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ ➤ಯುವಕ ಮೃತ್ಯು..!

error: Content is protected !!
Scroll to Top