ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು – News Kadaba

ಮಂಗಳೂರು: ಡ್ರಗ್ ಪ್ರಕರಣ     ➤ 13 ಮಂದಿಗೆ ಜಾಮೀನು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ನಗರದಲ್ಲಿ ಇತ್ತೀಚೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂ ಬಂಧಿಸಲ್ಪಟ್ಟಿದ್ದ 13 ಮಂದಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಿವಿಧ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಉಳಿದ 11 ಮಂದಿ ಕೂಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಈ ಪ್ರಕರಣದ ಕುರಿತು ಇತ್ತೀಚೆಗೆ ಮಾತನಾಡಿದ್ದ ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಮನೋರಾಜ್‌ ರಾಜೀವ ಹಾಗೂ ವಿಧಿವಿಜ್ಞಾನ ತಜ್ಞ ಡಾ.ಮಹಾಬಲೇಶ್ ಶೆಟ್ಟಿ “ವೈದ್ಯಕೀಯ ಕಾಲೇಜುಗಳ ಕೆಲವು ವೈದ್ಯರು ಹಾಗೂ ವಿದ್ಯಾರ್ಥಿಗಳು ಗಾಂಜಾ ಮಾರಾಟದಲ್ಲಿ ಭಾಗಿ ಆಗದಿದ್ದರೂ, ಅವರ ವಿರುದ್ಧ ಗಾಂಜಾ ಮಾರಾಟದ ಪ್ರಕರಣ ದಾಖಲಿಸಿಕೊಳ್ಳುವ ಮೂಲಕ ಪೊಲೀಸರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ನಿಯಮ ಮೀರಿ ವರ್ತಿಸಿದ್ದಾರೆ’ ಎಂದು ಆರೋಪಿಸಿದ್ದರು.

 

Scroll to Top