(ನ್ಯೂಸ್ ಕಡಬ)newskadaba.com ಲಕ್ಷ್ಮೇಶ್ವರ, ಜ.28. ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಶಿ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಲಕ್ಷ್ಮೇಶ್ವರ ಹುಬ್ಬಳ್ಳಿ ರಸ್ತೆಯ ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.