ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಿಸಿದ ಮಳೆ ನೀರು ಕೊಯ್ಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಎನ್‌ಜಿಒವೊಂದರ ವಿಶಿಷ್ಟ ಉಪಕ್ರಮವೊಂದು ರಾಜ್ಯದ ವಿವಿಧ ಜಿಲ್ಲೆಗಳ 15 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿನಿಯರ ಹಾಜರಾತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಶೌಚಾಲಯಗಳಲ್ಲಿ ಮೂಲಸೌಕರ್ಯ ಇಲ್ಲದಿರುವುದು, ಅಸಮರ್ಪಕ ನೀರಿನ ಪೂರೈಕೆಯಿಂದಾಗಿ ವಿದ್ಯಾರ್ಥಿನಿಯರು ಪ್ರತೀ ತಿಂಗಲೂ 3-4 ದಿನಗಳ ಕಾಲ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದರು. ಸೌಲಭ್ಯಗಳಿಲ್ಲದ ಕಾರಣ ವಿದ್ಯಾರ್ಥಿನಿಯರು ಋತು ಚಕ್ರ ಸಮಯದಲ್ಲಿ ಗೈರು ಹಾಜರಾಗುತ್ತಿದ್ದರು ಎಂಬುದನ್ನು ಅಧ್ಯಯನವೊಂದು ತಿಳಿಸಿತ್ತು.

ಈ ಸಮಸ್ಯೆಯನ್ನ ಮನಗಂಡ ಎನ್ವಿರಾನ್ಮೆಂಟ್ ಅಸೋಸಿಯೇಷನ್ ​​ಆಫ್ ಬೆಂಗಳೂರು (ಇಎಬಿ), ಸರ್ಕಾರೇತರ ಸಂಸ್ಥೆಯು ಸೌಲಭ್ಯಗಳನ್ನು ಸ್ಥಾಪಿಸುವುದರ ಜೊತೆಗೆ ನೀರಿನ ಸಮಸ್ಯೆ ಬಗೆಹರಿಸಲು ಮಳೆನೀರು ಕೊಯ್ಲು ವಿಧಾನವನ್ನು ಅಳವಡಿಸಲು ಮುಂದಾಯಿತು. ಸಂಸ್ಥೆಯು ದೇವನಹಳ್ಳಿ, ಚಿಂತಾಮಣಿ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಮಳೆ ನೀರು ಕೊಯ್ಲು ಘಟಕವನ್ನು ಸ್ಥಾಪಿಸಿದ್ದು, ಈ ಸ್ಥಳಗಳಲ್ಲಿನ ಶಾಲೆಗಳಲ್ಲಿ ವರ್ಷವಿಡೀ ಸಮರ್ಪಕ ನೀರು ಲಭ್ಯವಾಗುತ್ತಿದೆ. ಸಂಸ್ಥೆಯ ಈ ಉಪಕ್ರಮದಿಂದಾಗಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಹಾಜರಾತಿ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ.

error: Content is protected !!
Scroll to Top