ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಹೃದಯಾಘಾತದಿಂದ ನಿಧನ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟು ಮಿಂಚಿನ ಓಟ, ಬೆಂಕಿಯ ಬಲೆ, ಏಳು ಸುತ್ತಿನ ಕೋಟೆ, ಆಕಸ್ಮಿಕ, ರೇ, ಆಪ್ತ ರಕ್ಷಕ, ಅಮೃತಧಾರೆ, ಕುರಿಗಳು ಸಾರ್ ಕುರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಸಿನಿಮಗಳಲ್ಲಿ ನಟಿಸಿದ್ದಾರೆ.

Also Read  8000 ಮಹಿಳಾ ಪೌರ ಕಾರ್ಮಿಕರಿಗೆ ಕೆಲಸ ಕಾಯಂ

 

 

error: Content is protected !!