ಮಂಡ್ಯ ಚಿರತೆ ದಾಳಿಗೆ ವ್ಯಕ್ತಿ ಗಂಭೀರ ➤ಖಾಸಗಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com,ಮಂಡ್ಯ , ಜ.30. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ಕಬ್ಬು ಕಟಾವು ಮಾಡುತ್ತಿದ್ದ ಭದ್ರಾವತಿ ಮೂಲದ ಜಯರಾಮ್​ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ.

ಗಂಭೀರವಾಗಿ ಗಾಯಗೊಂಡ ಜಯರಾಮ್​ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಚಿರತೆ ದಾಳಿಯಿಂದ ರಾಯಸಮುದ್ರ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

error: Content is protected !!

Join the Group

Join WhatsApp Group