100 ರೂ.ನಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆ ➤ ನ್ಯಾ| ಸಂತೋಷ್‌ ಹೆಗ್ಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಪ್ರಸ್ತುತ ದೇಶದಲ್ಲಿ ಸರಕಾರದಿಂದ ಮಂಜೂರಾಗುವ 100 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆಯಾಗುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ. ಮಂಗಳೂರಿನಲ್ಲಿ ಆಯೋಜಿಸಿದ ಜಿಲ್ಲಾ ಸಮಾವೇಶ “ಪರಿಕಲ್ಪನೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1985ರಲ್ಲಿ ರಾಜೀವ್‌ ಗಾಂಧಿಯವರು ಪ್ರಧಾನಿಯಾಗಿದ್ದಾಗ ಸರಕಾರದಿಂದ ಮಂಜೂರಾಗುವ ಪ್ರತೀ 1 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗಾಗಿ ಬಳಕೆಯಾಗುತ್ತದೆ ಎನ್ನುವ ಮಾತು ಚಾಲ್ತಿಯಲ್ಲಿತ್ತು. ಅಭಿವೃದ್ಧಿ ಹೆಸರಿನಲ್ಲಿ ಕೇಂದ್ರ, ರಾಜ್ಯ ಸರಕಾರಗಳು ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ವ್ಯಯಿಸುತ್ತವೆ. ದೇಶದಲ್ಲಿ ಶ್ರೀಮಂತರಾಗಲು ಪೈಪೋಟಿ ಉಂಟಾಗಿದ್ದು, ಇದು ಸಮಾಜದಲ್ಲಿ ಬಿಕ್ಕಟ್ಟು ಸೃಷ್ಟಿಸಲಿದೆ. ದುರಾಸೆ ಎಂಬ ರೋಗ ಎಲ್ಲೆಡೆ ಹರಡುತ್ತಿದೆ. ಇದು ಎಲ್ಲಿಗೆ ತಲುಪುತ್ತದೆ ಎಂದು ಯೋಚಿಸುವಾಗ ಭಯವಾಗುತ್ತದೆ ಎಂದರು.

Also Read  ವಾಹನ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ➤ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಮತ್ತಷ್ಟು ಹೆಚ್ಚಳ.!

error: Content is protected !!
Scroll to Top