ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ – News Kadaba

➤ ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಗುಂಡಿನ ದಾಳಿಗೆ ಬಲಿ

(ನ್ಯೂಸ್ ಕಡಬ) newskadaba.com,ಒಡಿಶಾ , ಜ.30. ಭುವನೇಶ್ವರ ಪೊಲೀಸ್ ಅಧಿಕಾರಿಯೊಬ್ಬರಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ನಬಾ ಕಿಶೋರ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ಚಂದ್ರ ದಾಸ್ ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಸಚಿವರ ಮೇಲೆ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿಯನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಅಧಿಕಾರಿ ಸಚಿವರ ಮೇಲೆ ಏಕೆ ಗಂಡು ಹಾರಿಸಿದ್ದು ಎಂಬ ಮಾಹಿತಿ ಲಭ್ಯವಾಗಿಲ್ಲ. ನಬಾ ದಾಸ್ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಕಾರಿನಿಂದ ಕೆಳಗಿಳಿಯುವಾಗ  ಈ ದಾಳಿ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

Scroll to Top