ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಫಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಅಹಮ್ಮದ್ (22) ಮೃತರು. ಕೇರಳದ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ.

ಗಂಭೀರ ಗಾಯಗೊಂಡ ಓರ್ವ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿಯಾಗಿದ್ದಾರೆ. ನಾಲ್ವರು ಗೆಳೆಯರಾಗಿದ್ದು ಕೇರಳಕ್ಕೆಂದು ತೆರಳುವಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Also Read  ಆಸ್ಪತ್ರೆಗೆ ನುಗ್ಗಿ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆಗೈದ ಸಹೋದರ

error: Content is protected !!
Scroll to Top