ಕಾಸರಗೋಡು: ಬಸ್ಸು – ಪಿಕಪ್ ಢಿಕ್ಕಿ ! ➤ ಓರ್ವ ಸಾವು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಬಸ್ಸು ಮತ್ತು ಪಿಕಪ್ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಅಂಬಲತ್ತರ ಪಾರಪಳ್ಳಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಅಂಬಲಪಾಡಿಯ ಪನತ್ತಡಿಯ ಯೂಸಫ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದಡ್ಕದಿಂದ ತೆರಳುತ್ತಿದ್ದ ಖಾಸಗಿ ಬಸ್ಸು ಮತ್ತು ಪಿಕಪ್ ನಡುವೆ ಈ ಅಪಘಾತ ನಡೆದಿದೆ.

Scroll to Top