ಚಾಲಕ ಮತ್ತು ಕಂಡಕ್ಟರ್‌ ನಡುವೆ ರಂಪಾಟ ! ➤ ರಸ್ತೆಯ ಮಧ್ಯೆ ಬಸ್ ನಿಲ್ಲಿಸಿ ಹೊಡೆದಾಟ

Crime

(ನ್ಯೂಸ್ ಕಡಬ)newskadaba.com ಉಡುಪಿ, ಜ.30. ರಸ್ತೆಯ ಮಧ್ಯೆ ಖಾಸಗಿ ಬಸ್ ಕಂಡಕ್ಟರ್‌ಗೆ ಕೆಎಸ್ಆರ್‌‌ಟಿಸಿ ಬಸ್ ಚಾಲಕ ಮತ್ತು ಖಾಸಗಿ ಬಸ್ ಕಂಡಕ್ಟರ್‌ ನಡುವೆ ಗಲಾಟೆ ನಡೆದಿರುವ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ.

ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ.

ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ ಮೇಲೆ ಬಸ್ ಚಾಲಕ ಸೈಯದ್ ಚಪ್ಪಲಿಯಲ್ಲಿ ಹೊಡೆದಿದ್ದಾರೆ.

 

Scroll to Top