ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ ! – News Kadaba

ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಂಡ ಸುಳಿಗಾಳಿ !

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಜ.30. ಕಾರ್ಕಳ ಗಾಂಧಿ ಮೈದಾನದಲ್ಲಿ ಸುಳಿಗಾಳಿ ಕಾಣಿಸಿಕೊಂಡಿದ್ದು, ಈ ಪ್ರಾಕೃತಿಕ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.

ಗಾಂಧಿ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಗಾಳಿಯು ಕಾಣಿಸಿಕೊಂಡಿದ್ದು, ಸುರಳಿ ಆಕಾರದಲ್ಲಿ ಧೂಳು, ಮುಗಿಲೆತ್ತರಕ್ಕೆ ಚಿಮ್ಮಲು ಪ್ರಾರಂಭಿಸಿತು. ಈ ವೇಳೆ ದೂಳಿನ ಜೊತೆಗೆ ಮೈದಾನದಲ್ಲಿದ್ದ ಕಸ ಗಿಡಗಂಟಿಗಳನೆಲ್ಲ ಹೊತ್ತು ಮೇಲಿರಿತು. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ವೀಕ್ಷಿಸಿದರು.

ಇನ್ನು ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ ಈ ಹಿಂದೆಯೂ ಇದೇ ರೀತಿಯ ಸುಳಿಗಾಳಿ ಕಂಡುಬಂದಿತ್ತು. ಕಾರ್ಕಳ ಮೂಡುಬಿದರೆ ಅಜೆಕಾರು ಬೆಳಪು ಮಲ್ಪೆ ಪರಿಸರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸುಳಿಗಾಳಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

 

Scroll to Top