ಕನ್ನಡದ ಖ್ಯಾತ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದ ಅವರು ಬಳಲಿದ್ದರು. ಹೃದಯ ಕಾಯಿಲೆ ಹೊಂದಿದ್ದ ಅವರಿಗೆ ಇತ್ತೀಚೆಗೆ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆಸ್ಪತ್ರೆಯಲ್ಲಿದ್ದ ಅವರು ಡಿಸ್‌ಚಾರ್ಜ್‌ ಆಗಿ ಮನೆಗೆ ಬಂದಿದ್ದರು ಎನ್ನಲಾಗಿದೆ.

error: Content is protected !!
Scroll to Top