ಫೆ.1 ರಿಂದ ಗುತ್ತಿಗೆ ಕಾರ್ಮಿಕರ ಮುಷ್ಕರ ನೀರು, ಸ್ವಚ್ಚತೆ ಸೇವೆಯಲ್ಲಿ ವ್ಯತ್ಯಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ನಗರದ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಕಸ ಸಾಗಿಸುವ ವಾಹನಗಳ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್‌ಗಳು, ಕ್ಲೀನರ್‌ಗಳು, ಹೆಲ್ಪರ್, ಒಳಚರಂಡಿ ಕಾರ್ಮಿಕರು ಫೆ.1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ರಾಜ್ಯ ಸಂಘದ ಕರಾವಳಿ ವಿಭಾಗದ ಸಂಚಾಲಕ ಬಿ ಕೆ ಅಣ್ಣಪ್ಪ ಕರೆಕಾಡು, ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಹೊರಗುತ್ತಿಗೆ ನೌಕರರಿದ್ದಾರೆ. ರಾಜ್ಯದ 330 ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಪೌರಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು ಎನ್ನಲಾಗಿದೆ.

Also Read  ಉಡುಪಿ ಜಿ.ಪಂ. ನೂತನ ಸಿಇಒ ಆಗಿ ಡಾ| ನವೀನ್‌ ಭಟ್‌ ನೇಮಕ

 

error: Content is protected !!
Scroll to Top