ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಸಹೋದರ ಅಬ್ದುಲ್ ರಿಫಾಯಿ ಮೃತಪಟ್ಟಿದ್ದು, ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್ (22) ಇಂದು ಮೃತಪಟ್ಟಿದ್ದು, ಅವರು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದರು.

ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ತಂದೆಯ ಸಹೋದರನ ಪುತ್ರ ಬಾಷರ್ ಅಹಮ್ಮದ್ ಸೇರಿದಂತೆ ಆತನ ಸಹಪಾಠಿಗಳಾದ ಫಾತಿಮ ಹಾಗೂ ರೇವತಿ ಮಂಗಳೂರಿನಿಂದ ತಲಪಾಡಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಕೊಲ್ಯ ಸಮೀಪ ಕಾರು ಚಾಲಕನ ನಿಯಂತ್ರಣ ಕಳೆದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಪೂರ್ಣ ನುಜ್ಜುಗುಜ್ಜಾಗಿತ್ತು.

Also Read  ಉಡುಪಿ : ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆಗೆ ಶರಣು.!

 

error: Content is protected !!
Scroll to Top