(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ವಿಭಾಗದಲ್ಲಿ 95 ಸೇರಿದಂತೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಒಟ್ಟು 273 ಹುದ್ದೆಗಳಿವೆ ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅನುಸೂಚಿತ ಜಾತಿ ಮತ್ತು ಇತರ ವರ್ಗಗಳಿಗೆ 5 ವರ್ಷಗಳ ವಿನಾಯಿತಿ, ಒಬಿಸಿ ಅಂದರೆ ಇತರ ಹಿಂದುಳಿದ ವರ್ಗದವರಿಗೆ 3 ವರ್ಷದ ವಿನಾಯಿತಿ ಅನ್ವಯಿಸುತ್ತದೆ. ಅರ್ಜಿಗಳನ್ನು https://india postgdsonline.gov.in ಮೂಲಕ ಫೆ. 16ರ ಮೊದಲು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 05.06.2022ಕ್ಕೆ ಅನ್ವಯವಾಗುವಂತೆ 18ರಿಂದ 40 ವರ್ಷದ ವಯೋ ಮಿತಿಯೊಳಗಿರಬೇಕು ಎಂದು ವರದಿ ತಿಳಿಸಿದೆ.