(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಬಂದಿದ್ದು, ಇದೀಗ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪಿಸಿಆರ್ ಕರೆ ಮಾಡುವ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಇನ್ನು ಕರೆ ಬಂದ ನಂತರ ದೆಹಲಿ ಪೊಲೀಸರು ಆತನನ್ನು ಗುರುತಿಸಿ ತಕ್ಷಣ ಬಂಧಿಸಿರುವುದಾಗಿ ವರದಿಯಾಗಿದೆ.
ಕರೆ ಮಾಡಿದ ವ್ಯಕ್ತಿ 38 ವರ್ಷದ ಮಾನಸಿಕ ಅಸ್ವಸ್ಥ ವ್ಯಕ್ತಿ ತಿಳಿಯಲಾಗಿದ್ದು, ಇದೀಗ ಆರೋಪಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಯಲಾಗಿದೆ.
