ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಮೊಬೈಲ್‌ ಹೆಚ್ಚು ಬಳಕೆ ಮಾಡಬೇಡ ಎಂದು ಹೇಳಿದಕ್ಕೆ ನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ. ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಬಾಲಕನು ಹೆಚ್ಚು ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿ ಸ್ವಲ್ಪ ಗದರಿಸಿದ್ದು, ಇದರಿಂದ ಬೇಸರಗೊಂಡು ನಾನು ಸ್ನಾನ ಮಾಡಿ ಬರುವುದಾಗಿ ಹೇಳಿ ರೂಮಿನೊಳಗೆ ಹೋದವನು ಬಾರದಿದ್ದಾಗ ತಂದೆ ಜಗದೀಶ್ ಬಾತ್ರೂಮ್ ಬಳಿಯಿರುವ ಕಿಟಕಿಯ ಮೂಲಕ ರೂಮಿನೊಳಗೆ ಹೋಗಿ ನೋಡಿದಾಗ ಬಾಲಕ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಇನ್ನು ತಕ್ಷಣ ನೇಣು ಬಿಗಿದ ಶಾಲನ್ನು ಕತ್ತರಿಸಿ ಕೆಳಗೆ ಇಳಿಸಿ ನೋಡಿದಾಗ ಬಾಲಕ ಮೃತಪಟ್ಟಿರುವುದು ತಿಳಿದು ಬಂದಿದೆ.

Also Read  ಬಸ್ ಢಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತ್ಯು

 

error: Content is protected !!
Scroll to Top