ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’

(ನ್ಯೂಸ್ ಕಡಬ)newskadaba.com ಪುತ್ತೂರು, ಜ.31. ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ಅಮಿತ್ ಶಾ ಅವರ ಪುತ್ತೂರು ಭೇಟಿ ಬಹುತೇಕ ಖಚಿತವಾಗಿದ್ದು , ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು, ಬಿಜೆಪಿ ನಾಯಕರು, ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಬಿಜೆಪಿ ನಾಯಕರ ದಂಡೇ ಸಮಾವೇಶಕ್ಕೆ ಆಗಮಿಸಲಿದೆ.

Also Read  ಕರಾವಳಿಯಲ್ಲಿ ಮತ್ತೇ ಮುಂದುವರಿದ ಮಳೆರಾಯ ➤ 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಸಿಲುಕಿರುವ ಶಂಕೆ

ಜೊತೆಗೆ ದ.ಕ.ಮತ್ತು ಹೊರಜಿಲ್ಲೆಯಿಂದಲೂ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರೂ ಈ ಸಮಾವೇಶದಲ್ಲಿ ಭಾಗವಹಿಸಲಿದ್ದು , ಜಿಲ್ಲೆ ಮತ್ತು ರಾಜ್ಯದ ರಾಜಕೀಯ ಭವಿಷ್ಯವೇ ಅಮಿತ್ ಶಾ ಭೇಟಿಯ ನಂತರ ಬದಲಾಗುವ ನಿರೀಕ್ಷೆಯಲ್ಲಿದೆ.

 

error: Content is protected !!
Scroll to Top