(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು 39 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನದ ಪ್ರದೇಶದಲ್ಲಿ ನಡೆದಿದೆ.
ಬಸ್ 48 ಮಂದಿ ಪ್ರಯಾಣಿಕರನ್ನು ಹೊತ್ತು ಕ್ವೆಟ್ಟಾದಿಂದ ಕರಾಚಿಗೆ ಸಾಗುತ್ತಿತ್ತು. ಲಾಸ್ಬೆಲಾ ಜಿಲ್ಲೆಯ ಬೇಲಾ ಬಳಿ ಬಸ್ ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಸೇತುವೆಯ ಪಿಲ್ಲರ್‌ಗೆ ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ.
ಬಸ್‌ನಲ್ಲಿದ್ದ 39 ಮಂದಿ ಘಟನೆಯಲ್ಲಿ ಅಸುನೀಗಿದರೆ ಹಲವರು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.