ತೆರಿಗೆ ವಂಚನೆ ಪ್ರಕರಣ ➤ಚಿನ್ನಾಭರಣ ವ್ಯಾಪಾರಿಗಳಿಗೆ ಐಟಿ ಶಾಕ್!

(ನ್ಯೂಸ್ ಕಡಬ) newskadaba.com,ಬೆಂಗಳೂರು.ಜ.31. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಮಾಹಿತಿಯನ್ನು ಕಲೆ ಹಾಕಿದ ಆದಾಯ ಅಧಿಕಾರಿಗಳು ನಗರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ. ತೆರಿಗೆ ವಂಚನೆ ಮಾಡಿ ವ್ಯಾಪಾರ ಮಾಡುತ್ತಿದ್ದ ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣಗಳ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.

ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರದಲ್ಲಿನ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಮಾಡಿ ದಾಖಲೆ ಪತ್ರಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ ದೂರುಗಳ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ. ಸುಮಾರು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪ್ರದೇಶದಲ್ಲಿ ನಡೆದಿರುವ ದಾಳಿಯಲ್ಲಿ ಪಾಲ್ಗೊಂಡಿದ್ದರು.

Also Read  ಮುಖ್ಯಮಂತ್ರಿಯವರನ್ನು ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದವರೇ ಈಗ ಸಚಿವರಾಗಿದ್ದಾರೆ...! ➤ ರೇಣುಕಾಚಾರ್ಯ ಗಂಭೀರ ಆರೋಪ

ತಂಡ ತಂಡವಾಗಿ ಅಧಿಕಾರಿಗಳು ಚಿನ್ನಾಭರಣಗಳ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದ್ದು, ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

.

error: Content is protected !!
Scroll to Top