(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ತುಳು ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಇದು ಹೆಚ್ಚಾಗಿ ಮಾತನಾಡುತ್ತಾರೆ . ತುಳು ಮಾತಾಡುವವರನ್ನು ತುಳುವರು (ತುಳುವಿನಲ್ಲಿ ತುಳುವೆರ್) ಎಂದು ಕರೆಯುತ್ತಾರೆ.
ಕರಾವಳಿ ಜನರು ಹಲವು ವರ್ಷಗಳಿಂದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವಂತೆ ತುಳು ಭಾಷಿಕರು ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ.