ಕಾರು – ಬಸ್‌ ನಡುವೆ ಅಪಘಾತ ➤ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಜ.31. ಕಾರು – ಬಸ್‌ ನಡುವಿನ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪಿದ ಘಟನ ಪಾಲ್ಘರ್‌ ನ ಮುಂಬೈ-ಅಹಮದಾಬಾದ್ ಹೆದ್ದಾರಿಯ ದಹನು ಪ್ರದೇಶದಲ್ಲಿ ನಡೆದಿದೆ.


ಮೊಹಮ್ಮದ್ ಹಫೀಜ್ (36), ಇಬ್ರಾಹಿಂ ದಾವೂದ್ (60), ಆಶಿಯಾ (57) ಮತ್ತು ಇಸ್ಮಾಯಿಲ್ ದೇಸಾಯಿ (42) ಘಟನೆಯಲ್ಲಿ ಮೃತಪಟ್ಟ ದುರ್ಧೈವಿಗಳು.
ಮೃತರು ಸೂರತ್‌ನ ಬಾರ್ಡೋಲಿ ನಿವಾಸಿಗಳು ಎಂದು ಪಾಲ್ಘರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ.
ಕಾರು ಗುಜರಾತ್‌ನಿಂದ ಮುಂಬೈಗೆ ಬರುತ್ತಿತ್ತು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಎದುರುಗಡೆಯಿಂದ ಬರುತ್ತಿದ್ದ ಬಸ್‌ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಹಾನಿಯಾಗಿದ್ದು, ನಾಲ್ವರು ಮೃತಪಟ್ಟು, ಇತರರು ಗಾಯಗೊಂಡಿದ್ದಾರೆ. ಪೊಲೀಸರು ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Also Read  ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ

error: Content is protected !!
Scroll to Top