ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.01. ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ.

ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

Also Read  ಮೂಡುಬಿದಿರೆ : ಮಹಾ ಕುಂಭ ಮೇಳದ ಪವಿತ್ರ ದ್ವಾರಗಳಿಗೆ ಲೆಕ್ಸಾ ಲೈಟಿಂಗ್ ಅಲಂಕಾರ

 

error: Content is protected !!
Scroll to Top