(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಅಪರಾಧಿ ಮೃತಪಟ್ಟಿದ್ದರೂ ದಂಡ ವಸೂಲಿ ಮಾಡಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣವೊಂದರಲ್ಲಿ ಅಪರಾಧಿಗೆ ದಂಡವನ್ನುವ ವಿಧಿಸಲಾಗಿತ್ತು, ಆದರೆ ಅಪರಾಧಿ ಸಾವನ್ನಪ್ಪಿದ್ದು, ಈ ಬಗ್ಗೆ ಮೃತನ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮಾಹಿತಿ ನೀಡಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರ್ ಅಮರಣನವರು ಈ ಆದೇಶವನ್ನು ನೀಡಿದ್ದಾರೆ. ಆತನ ಆಸ್ತಿಯ ವಾರಸುದಾರರು ದಂಡವನ್ನು ಪಾವತಿಸಬೇಕಾಗಿದೆ ಎಂದು ತಿಳಿಸಿದೆ ಎನ್ನಲಾಗಿದೆ.