ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ `ಕಾವೇರಿ 2.0′ ತಂತ್ರಾಂಶ ಜಾರಿ.! ➤ ಸಚಿವ ಆರ್. ಅಶೋಕ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತ ಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಫೆಬ್ರವರಿ 2 ರಿಂದ ಮೈಸೂರು,ಮಂಗಳೂರು, ಬೆಳಗಾವಿ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Also Read  ಕೆ.ಜಿ.ಟಿ.ಟಿ.ಐ.ನಲ್ಲಿ ಕೌಶಲ್ಯ ಅಭಿವೃಧ್ದಿ ತರಬೇತಿ

ಹೊಸ ಕಾವೇರಿ 2.0 ತಂತ್ರಾಂಶದಿಂದ ಕಚೇರಿಗಳಿಗೆ ಅಲೆದಾಟ ತಪ್ಪಲಿದೆ. ಸರ್ವರ್ ಸಮಸ್ಯೆಯೂ ಬಗೆಹರಿಯಲಿದೆ. ನಕಲಿ ದಾಖಲೆ ಸೃಷ್ಟಿಸಿ ಭೂಕಬಳಿಕೆಗೆ ಬ್ರೇಕ್ ಬೀಳಲಿದೆ ಎಂದು ಹೇಳಿದ್ದಾರೆ.

 

 

error: Content is protected !!
Scroll to Top