ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದ ವೈದ್ಯರು – News Kadaba

➤ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದ ವೈದ್ಯರು

(ನ್ಯೂಸ್ ಕಡಬ) newskadaba.com, ನವದೆಹಲಿ. ಫೆ.1   ದೆಹಲಿಯ ಆಸ್ಪತ್ರೆಯೊಂದರಲ್ಲಿ ಸರ್ಜರಿಗೆಂದು ಅಡ್ಮಿಟ್ ಆಗಿದ್ದ 15 ವರ್ಷದ ಬಾಲಕಿಯ ಅಂಗಾಂಗಗಳನ್ನು ತೆಗೆದಿಟ್ಟುಕೊಂಡು, ಆಕೆಯ ದೇಹವನ್ನು ಪಾಲಿಥಿನ್ ಚೀಲಗಳಲ್ಲಿ ತುಂಬಿ ಕೊಂದಿರುವ ಭೀಕರ ಘಟನೆ ನಡೆದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಆಸ್ಪತ್ರೆಗೆ ದಾಖಲಿಸಿದ್ದ ಪೋಷಕರು ಈ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳವಾರ ಆ ಬಾಲಕಿಯ ಶವಪರೀಕ್ಷೆ ನಡೆಸಲಾಗಿದ್ದು, ಅದರ ವರದಿ ಬಂದ ನಂತರ ಆ ಆರೋಪ ನಿಜವೋ, ಸುಳ್ಳೋ ಎಂಬುದು ಖಚಿತವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರುಳಿಗೆ ಸಂಬಂಧಿಸಿದ ಸಮಸ್ಯೆಯಿಂದ ಆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಆಕೆ ಮೃತಪಟ್ಟಿರುವುದನ್ನು ಕುಟುಂಬದವರಿಗೆ ತಡವಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ಉಪ ಆಯುಕ್ತ  ಉತ್ತರ ಸಾಗರ್ ಸಿಂಗ್ ಕಲ್ಸಿ, ಬಾಲಕಿಯ ಕುಟುಂಬದವರು ಯಾವುದೇ ದೂರು ನೀಡದೆ ಶವವನ್ನು ಮನೆಗೆ ಕೊಂಡೊಯ್ದಿದ್ದಾರೆ. ನಂತರ ಅವರು ಪೊಲೀಸರಿಗೆ ಕರೆ ಮಾಡಿ ವೈದ್ಯರು ತಮ್ಮ ಮಗಳ ಅಂಗಾಂಗಗಳನ್ನು ತೆಗೆದಿರಬಹುದು ಎಂದು ಶಂಕಿಸಿದ್ದಾರೆ. ಮೃತ ಬಾಲಕಿಯ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸುತ್ತಿದ್ದಾಗ ಆಕೆಯ ಕುಟುಂಬದವರು ಈ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

Scroll to Top