ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ರಾಜ್ಯ ಸರ್ಕಾರವು ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸುತ್ತೋಲೆ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಕ್ಷಣ ನೀಡುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಅಂಗನವಾಡಿ ಶಿಕ್ಷಣ ಅವಧಿಯನ್ನು 3 ತಾಸು ಕಡಿತ ಮಾಡಿದ್ದು, ಈ ಹಿಂದೆ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಶಿಕ್ಷಣ ಅವಧಿಯನ್ನು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ನಡೆಸುವಂತೆ ಆದೇಶಿಸಲಾಗಿತ್ತು. ಇದನ್ನು ಬದಲಿಸಿ ಶಿಕ್ಷಣದ ಅವಧಿಯನ್ನು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಸಲು ಸಮಯ ನಿಗದಿ ಮಾಡಲಾಗಿದೆ.

Also Read  ಸ್ಮಾರ್ಟ್ ಸಿಟಿ ಬಸ್ಸ್ ನಿರ್ಮಾಣ ಯೋಜನಾ ವೆಚ್ಚ ಅಧಿಕ ➤ ವಿಚಾರಣೆ ನಡೆಸುವಂತೆ ಲೋಕಸಭಾ ಸಂಸದ ಸೂಚನೆ.


ಇನ್ನು ಅಂಗನವಾಡಿ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಫಲಾನುಭವಿಗಳು ಮತ್ತು ಭಾಗ್ಯ ಲಕ್ಷ್ಮೀ ಯೋಜನೆಯ ಫಲಾನುಭವಿಯ ಪೋಷಕರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾದರೆ ಅಥವಾ ಚರ್ಚೆ ನಡೆಸಬೇಕಾದರೆ ಮಧ್ಯಾಹ್ನ 2 ಗಂಟೆಯ ನಂತರ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

error: Content is protected !!
Scroll to Top