ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ ➤ ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದ್ದು, ಕರಾವಳಿ ಸೇರಿದಂತೆ‌ ಉಳಿದೆಡೆ ಒಣ ಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣದ ಲಕ್ಷಣವಿದೆ. ವರದಿಗಳ ಪ್ರಕಾರ, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Also Read  ನೇಪಾಳಿ ಸೇನೆಯಿಂದ ಗುಂಡಿನ ದಾಳಿ ➤ ಭಾರತದ ಓರ್ವ ಪ್ರಜೆ ಸಾವು, ನಾಲ್ವರಿಗೆ ಗಾಯ

 

error: Content is protected !!
Scroll to Top