(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.20. ರಾಜ್ಯದ ಸುಮಾರು 379 ಪ್ರೌಢಶಾಲಾ ಶಿಕ್ಷಕರಿಗೆ ಅರ್ಹತೆಯ ಆಧಾರದಲ್ಲಿ ಭಡ್ತಿ ಭಾಗ್ಯ ನೀಡಲು ಸರಕಾರ ಮುಂದಾಗಿದೆ.
ಬುಧವಾರದಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿ ವರೆಗೆ ವಿದ್ಯಾಭ್ಯಾಸ ಮತ್ತು ಹೋಬಳಿ ಮಟ್ಟದ ಶಾಲೆಗಳಲ್ಲಿ 1 ರಿಂದ 12 ನೇ ತರಗತಿಯವರೆಗೆ ವಿದ್ಯಾಭ್ಯಾಸ ನೀಡಲು ಸರಕಾರ ಮುಂದಾಗಿದೆ ಎಂದರು. ಅಲ್ಲದೆ ಕೆಪಿಎಸ್ಸಿ ಮಾದರಿಯಲ್ಲಿ 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆಯನ್ನು ಮೂರು ಹಂತಗಳಲ್ಲಿ ಮೌಲ್ಯಮಾಪನ ನಡೆಸಲಾಗುವುದು. ಶಿಕ್ಷಕರ ಅರ್ಹತಾ ಪರೀಕ್ಷೆ (TET)ಯನ್ನು ಜನವರಿ ತಿಂಗಳಾಂತ್ಯದಲ್ಲಿ ನಡೆಸಲಾಗುವುದು ಎಂದರು. ಅಲ್ಲದೆ ಪ್ರಾಥಮಿಕ ಶಾಲೆಗಳಲ್ಲಿ ಐದಾರು ವರ್ಷ ಸೇವೆ ಸಲ್ಲಿಸಿದವರಿಗೆ ಬಡ್ತಿ ಭಾಗ್ಯ ನೀಡುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದರು.