ಉಳ್ಳಾಲ: ವಿಶೇಷ ಚೇತನ ಯುವತಿಯ ಶವ ಪತ್ತೆ ➤ ಕೊಲೆ ಶಂಕೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ.


ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ ಎನ್ನಲಾಗಿದೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ದರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು. ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಬಾಯಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು‌.

Also Read  ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ, ತೀವ್ರ ಪ್ರವಾಹ 19 ಜನರ ಸಾವು- 140 ರೈಲುಗಳು ರದ್ದು    

 

error: Content is protected !!
Scroll to Top