ಕರ್ನಾಟಕಕ್ಕೆ ಕೊಡುಗೆ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ➤ ನಿರ್ಮಲಾ ಸೀತರಾಮನ್

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. 2023-2024 ನೇ ಸಾಲಿನ ಕೇಂದ್ರ ಬಜೆಟ್‌ ನಲ್ಲಿ ಮಧ್ಯ ಕರ್ನಾಟಕದ ಕೃಷಿಗೆ ವರದಾನವಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ 5300 ಕೋಟಿ ರೂ. ಪ್ರಕಟಿಸಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿ.ಎಂ.ಸಿ. ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ (2,25,515 ಹೆಕ್ಟೇರ್) ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ.

ಬರಗಾಲ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ನಿರ್ಮಲಾ ಸೀತಾರಾಮನ್ 5,300 ಕೋಟಿ ಅನುದಾನ ಘೋಷಿಸಿದ್ದು, ಈ ವೇಳೆ ಪ್ರತಿಪಕ್ಷಗಳಿಂದ ಉದ್ಗಾರ ತೇಲಿಬಂತು. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರಾವರಿ ಅಗತ್ಯವನ್ನು ಪೂರೈಸುವ ಮಹತ್ವದ ಯೋಜನೆ ಇದಾಗಿದೆ.

Also Read  ಹಳೆಯ ಮೊಬೈಲ್ ಗಳಲ್ಲಿ ವಾಟ್ಸಪ್ ಬಳಸುವವರಿಗೆ ಶಾಕಿಂಗ್ ನ್ಯೂಸ್ ► ಡಿ.31 ರಿಂದ ವಾಟ್ಸಪ್ ಸೇವೆ ಸ್ಥಗಿತ

 

error: Content is protected !!
Scroll to Top