ಮಂಗಳೂರು: ಗಾಂಜಾ ದಂಧೆ ಪ್ರಕರಣ    ➤ ಬಂಧಿತ ವೈದ್ಯರು & ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.02. ಕರಾವಳಿಯಲ್ಲಿ ಭಾರೀ ಸದ್ದು ಮಾಡಿದ್ದ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತರಿಗೆ ಜಾಮೀನು ಮಂಜೂರಾಗಿದೆ.

ಒಟ್ಟು ನಾಲ್ವರು ವೈದ್ಯರು ಹಾಗೂ 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವೈದ್ಯಕೀಯ (ಬಿಡಿಎಸ್‌) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್‌ ಕಿಂಗ್‌ಡಮ್‌ನ ನೀಲ್‌ ಕಿಶೋರಿಲಾಲ್‌ ರಾಮ್‌ ಜಿ ಶಾ (38) ಹೊರತುಪಡಿಸಿ ಉಳಿದವರಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Also Read  ಕಡಬ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

error: Content is protected !!
Scroll to Top